ಹಾಸನ: ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಹಾಸನದ 7 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡಲಾಗುವುದು ಎಂದರು.
ಶಿವಲಿಂಗೇಗೌಡರು ಪಕ್ಷ ತೊರೆಯುವುದಿಲ್ಲ ಎಂದು ಅವರೇ ಹೇಳಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿಯನ್ನು ಭೇಟಿಯಾಗಿ ಅವರು ತಿಳಿಸಿದ್ದಾರೆ. ದೇವೇಗೌಡರು ಇರುವವರೆಗೂ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಶಿವಲಿಂಗೇಗೌಡ ಏನು ನಿರ್ಣಯ ಮಾಡಿದ್ದಾರೋ ಅವರಿಗೆ ಬಿಟ್ಟಿದ್ದು ಎಂದರು.
Laxmi News 24×7