Breaking News

ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿಗೆ ಥಳಿತ: ಪೊಲೀಸರಿಂದ ರಾಜ್ಯ ದ್ರೋಹ -ಎಚ್‌ಡಿಕೆ

Spread the love

ಬೆಂಗಳೂರು: ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಬುಧವಾರ ನಡೆದ ಕಾಲೇಜು ಹಬ್ಬದಲ್ಲಿ ಕನ್ನಡ ಧ್ವಜ ಹಿಡಿದು ಕುಣಿದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ.

ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ‌’ ಎಂದಿದ್ದಾರೆ.

‘ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ವಿದ್ಯಾರ್ಥಿಗಳ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ವಿದ್ಯಾರ್ಥಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ’ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

‘ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಇತರೆ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು’ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ