Breaking News

ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಚೋರ್ಲಾ ಘಾಟ್‍ನಲ್ಲಿ ಅಪಘಾತ

Spread the love

ಪಣಜಿ: ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ ಚೋರ್ಲಾ ಘಾಟ್‍ನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಮಹಾರಾಷ್ಟ್ರ ನೋಂದಣಿ ಹೊಂದಿದ ಕಾರೊಂದು ಡಿ.1ರ ರಾತ್ರಿ ಚೋರ್ಲಾ ಘಾಟ್‍ನಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಚೋರ್ಲಾ ಘಾಟ್‍ನಲ್ಲಿ ಕಾರು ಆಳವಾದ ಕಂದಕಕ್ಕೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ ಮೂಲದ ನೂರ್ ಶೇಖ್ ಮತ್ತು ಸುಧೀರ್ ಕುಮಾರ್ ಮೃತಪಟ್ಟವರು.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಗಾಯಾಳುಗಳನ್ನು ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾದ ಚೋರ್ಲಾ ಘಾಟ್‍ನಲ್ಲಿ ಅಪಘಾತಗಳು ನಿಂತಿಲ್ಲ. ನಾನಾ ಅವಘಡಗಳಿಂದ ಈ ಘಾಟ್ ಮೃತ್ಯುಕೂಪವಾಗುತ್ತಿದೆ. ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಅಪಘಾತ ಸಂಭವಿಸುತ್ತಲೇ ಇದೆ.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ