ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕ ಶಸ್ತ್ರಕ್ರಿಯೆಗೆ ಒಳಗಾಗಲಿದ್ದಾರೆ.
ಹಿಂದೆ ಮೂಲವ್ಯಾಧಿಗೆ ಚಿಕಿತ್ಸೆ ಪಡೆದಿದ್ದ ಜಾಗದಲ್ಲಿ ಸಣ್ಣ ಗುಳ್ಳೆಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಕಚೇರಿ ಮೂಲಗಳು ತಿಳಿಸಿವೆ.
ಮೈನರ್ ಆಪರೇಷನ್ ಬಳಿಕ ನಾಲ್ಕು ದಿನ ವಿಶ್ರಾಂತಿ ಪಡೆಯಲಿರುವ ಸಿದ್ದರಾಮಯ್ಯ, ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.