ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ನನ್ನ 40 ರೂಪಾಯಿ ತೆಗೆದುಕೊಂಡಿದ್ದೀಯಾ ಎಂದು ಅತ್ತೆ ಭೀಮವ್ವ ಗುಳ್ಳಣ್ಣವರು ಸೊಸೆ ರಂಗವ್ವ ಗುಳ್ಳಣ್ಣವರ ಮೇಲೆ ಆರೋಪ ಮಾಡಿದ್ದಾಳೆ.
ಸೊಸೆ ನಾನು ತೆಗೆದುಕೊಂಡಿಲ್ಲವೆಂದು ಹೇಳಿದ್ದಾಳೆ. ಆದರೂ ನಂಬದ ಅತ್ತೆ, ಸೊಸೆಯ ಜಗಳ ತಾರಕಕ್ಕೇರಿದೆ. ಪತ್ನಿ ಹಾಗೂ ತಾಯಿ ಜಗಳದಿಂದ ಕೋಪಗೊಂಡ ಮಗ ಮಳಿಯಪ್ಪ ಜಗಳ ಬಿಡಿಸುವ ವೇಳೆ ಪತ್ನಿ ಕಪಾಳಕ್ಕೆ ಪತಿ ಹೊಡೆದಿದ್ದಾನೆ. ಮೊದಲೇ ಅಸ್ತಮಾ, ಬಿ.ಪಿಯಿಂದ ಬಳಲುತ್ತಿದ್ದ ಪತ್ನಿ, ಒಂದೇ ಹೊಡೆತಕ್ಕೆ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಇನ್ನು 12ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳನ್ನೇ ಮದುವೆಯಾಗಿದ್ದ ಮಳಿಯಪ್ಪ ಹಮಾಲಿ ಕೆಲಸ ಮಾಡುತ್ತಿದ್ದ, ಕೇವಲ 40 ರೂಪಾಯಿ ಜಗಳ ಒಂದು ಜೀವವನ್ನೇ ಬಲಿ ತೆಗೆದುಕೊಂಡಿದ್ದು, ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದ ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ
ವಿಜಯಪುರ: ಎಪಿಎಂಸಿಯಲ್ಲಿ ಲೆಕ್ಕಪರಿಶೋಧಕನಾಗಿದ್ದ ಶಂಕರಯ್ಯ ಹಿರೇಮಠ ಎನ್ನುವ ವ್ಯಕ್ತಿ ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಟ್ರೇಡಿಂಗ್ ಲೈಸೆನ್ಸ್ ನೀಡಲು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ರೇಡ್ ಮಾಡಿದ್ದು, ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ದಾಳಿ ವೇಳೆ ಹೆಚ್ಚುವರಿಯಾಗಿ ಪತ್ತೆಯಾದ 39 ಸಾವಿರ ರೂಪಾಯಿಯನ್ನು ಜಪ್ತಿ ಮಾಡಲಾಗಿದೆ.
Laxmi News 24×7