Breaking News

ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ

Spread the love

ಬೆಂಗಳೂರು: 545 ಪಿಎಸ್‌ಐ ಅಭ್ಯರ್ಥಿಗಳ ಅಕ್ರಮ ಪರೀಕ್ಷಾ ನೇಮಕಾತಿ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪಾಲ್(Amrit Paul)​ ಅವರಿಗೆ ಸಂಕಷ್ಟ ಎದುರಾಗಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ.ಕೆ. ಲಕ್ಷ್ಮಿ ನಾರಾಯಣ ಭಟ್ ಅವರು ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದರು. ಈಗ ಅಮೃತ್ ಪಾಲ್ ವಿರುದ್ಧ ಪ್ರಾಸಿಕ್ಯೂಷನ್​ಗೆ ಸರ್ಕಾರ ಅನುಮತಿ ನೀಡಿದೆ.

ಐಪಿಸಿ ಸೆಕ್ಷನ್ 120B(ಅಪರಾಧಿಕ ಒಳಸಂಚು), 409(ಸರ್ಕಾರಿ ನೌಕರನಾಗಿ ಅಪರಾಧಿಕ ನಂಬಿಕೆ ದ್ರೋಹ), 420(ವಂಚನೆ), 465(ಸುಳ್ಳು ಸ್ಪಷ್ಟನೆಗೆ ದಂಡನೆ), 468(ವಂಚಿಸುವ ಉದ್ದೇಶಕ್ಕಾಗಿ ಸುಳ್ಳು ಸ್ಪಷ್ಟನೆ), 471(ಸುಳ್ಳು ಸ್ಪಷ್ಟನೆ ದಾಖಲಿಸಿ, ದಸ್ತಾವೇಜು ಅಭಿಲೇಖ ನೈಜವಾದುದೆಂದು ಬಳಕೆ), 420, IPC 34 (ಏಕೋದ್ದೇಶವನ್ನು ಮುಂದುವರೆಸಲು ಅನೇಕ ವ್ಯಕ್ತಿಗಳೊಂದಿಗೆ ಮಾಡಿದ ಕೃತ್ಯಲೋಪ)ಅಡಿ ಕೇಸ್ ದಾಖಲಾಗಿತ್ತು.

ಅಮೃತ್ ಪಾಲ್ ವಿರುದ್ದ ಸಾಲು ಸಾಲು ಸಾಕ್ಷ್ಯ ಲಭ್ಯ

ಅಮೃತ್ ಪಾಲ್ ವಿರುದ್ದ ಹಲವು ಸಾಕ್ಷ್ಯಗಳು ಸಿಕ್ಕಿವೆ. CRPC 164 ಅಡಿಯಲ್ಲಿ ನ್ಯಾಯಾಲಯದ ಮುಂದೆ ಅಮೃತ್ ಪಾಲ್ ವಿರುದ್ಧದ ಹೇಳಿಕೆಗಳನ್ನು ಸಿಬ್ಬಂದಿ ದಾಖಲಿಸಿಕೊಂಡಿದ್ದಾರೆ. ಕಳೆದ ಮೇ ನಲ್ಲಿಯೇ ಪಿಎಸ್‌ಐ ಪರೀಕ್ಷಾ ಅಕ್ರಮ ನೇಮಕಾತಿ ಕುರಿತಂತೆ ದೂರು ಬಂದಿದ್ದವು. ಅಕ್ಟೋಬರ್ ನಲ್ಲಿ ಬಂಧಿತ ಡಿವೈಎಸ್​ಪಿ ಶಾಂತರಾಜು ಸೇರಿ ಪಿಎಸ್‌ಐ ಅವ್ಯವಹಾರದ ಬಗ್ಗೆ ಪಿಟೇಶನ್ ಹಾಕಲಾಗಿತ್ತು. ನೇಮಕಾತಿ ವಿಭಾಗದ ಆಡಳಿತಾಧಿಕಾರಿ ಸುನೀತಾ ಬಾಯಿಗೆ ಕೆಲವರು ದೂರು ನೀಡಿದ್ರು. ಈ ವೇಳೆ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಅಮೃತ್ ಪಾಲ್ ಗಮನಕ್ಕೆ ತಂದಿದ್ದರು. ಈ ವೇಳೆ ಪಿಎಸ್‌ಐ ಪರೀಕ್ಷಾ ಅಕ್ರಮ ದೂರಿನ ಪ್ರತಿ ಕಸದ ಬುಟ್ಟಿಗೆ ಎಸೆಯುವಂತೆ ಅಮೃತ್ ಪಾಲ್ ಹೇಳಿದ್ದರು. ಈ ಬಗ್ಗೆ ಸಿಐಡಿ ತನಿಖೆ ವೇಳೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕದ್ದು ದಾಖಲಾಗಿದೆ. ಈ ಕುರಿತು ನ್ಯಾಯಾಲಯದ ಮುಂದೆ ಸುಮೀತಾ ಬಾಯಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ