Breaking News

ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್

Spread the love

ಬೆಂಗಳೂರು : ರೌಡಿ ಶೀಟರ್ ಗಳಲ್ಲಿ ಹೆಸರಿಸಲಾಗಿದ್ದ ಹಲವರು ಬಿಜೆಪಿ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟಕ್ಕೆ ಹೊಸ ಅಸ್ತ್ರವನ್ನಾಗಿ ಮಾಡಿದ್ದು, ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿ ಪ್ರಶ್ನೆಗಳ ಮಳೆ ಸುರಿಸಿದೆ.

 

”ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ.ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ.ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ ರಾಜಕಾರಿಣಿಯ ಮುಖವಾಡ ತೋಡಿಸಿದ್ದೇಕೆ ಬೊಮ್ಮಾಯಿ ಅವರೇ? ಬಿಜೆಪಿ ಸೇರುವ ಎಲ್ಲಾ ರೌಡಿಗಳ ಕೇಸ್‌ಗಳನ್ನೂ ಮನ್ನಾ ಮಾಡುವಿರಾ?” ಎಂದು ಪ್ರಶ್ನಿಸಿದೆ.

”ಸದ್ದಿಲ್ಲದೆ ಬಿಜೆಪಿಯ ರೌಡಿ ಮೋರ್ಚಾ ರೂಪುಗೊಳ್ಳುತ್ತಿದೆ, ಜೈಲಿನಲ್ಲಿರಬೇಕಾದವರು ಬಿಜೆಪಿ ಕಚೇರಿಯಲ್ಲಿದ್ದಾರೆ.ರೌಡಿಗಳಿಗೆ ಪ್ರೋತ್ಸಾಹಿಸುವುದಿಲ್ಲ ಎಂದು ಯೂಟರ್ನ್ ಸ್ಟೇಟ್ಮೆಂಟ್ ನೀಡಿದ್ದ ಬೊಮ್ಮಾಯಿ ಅವರೇ,ಆನೇಕಲ್‌ ಪುರಸಭೆಗೆ ರೌಡಿ ಶೀಟರ್‌ನನ್ನು ನಿಮ್ಮದೇ ಸರಕಾರ ನಾಮನಿರ್ದೇಶನ ಮಾಡಿರುವುದೇಕೆ? ದಮ್ಮು ತಾಕತ್ತಿದ್ದರೆ ಉತ್ತರಿಸಿ” ಎಂದು ಪ್ರಶ್ನಿಸಿದೆ.

”ಸಿಎಂ ಬೊಮ್ಮಾಯಿಯವರು ಧಮ್, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬೊಮ್ಮಾಯಿ ಅವರೇ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ.” ಎಂದು ಕುರುಕಿದೆ.

”ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್‌ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ ಸಂಸದ ಪ್ರತಾಪ್ ಸಿಂಹ.ಬೊಮ್ಮಾಯಿ ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ” ಎಂದು ಪ್ರಶ್ನಿಸಿದೆ.”ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು,ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರು ಸೆಲ್ಯೂಟ್ ಹೊಡೆಯುವಂತಾಗಿದೆ. ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಸ್ಥೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ.ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು” ಎಂಬಂತಾಗಿದೆ. ಎಂದು ಲೇವಡಿ ಮಾಡಿದೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ