ಬೆಳಗಾವಿ: ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವತು ಮೊದಲು ಜಾಗ ನೀಡಲಿ ಎಂದು ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವತ್ ತಿರುಗೇಟು ನೀಡಿದರು.
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ ಬೆನ್ನಲ್ಲೇ ಶಿವಸೇನೆ ವಕ್ತಾರ ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕರ್ನಾಟಕದ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಜಾಗ ಕೊಡಲಿ, ಆಮೇಲೆ ಮುಂದೆ ನೋಡೋಣ ಎಂದು ತಿರುಗೇಟು ನೀಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ನಾಟಕದಲ್ಲಿ ಮಹಾರಾಷ್ಟ್ರ ಸಚಿವರು ಹೋಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಹೋಗಲು ಆಗದಿದ್ದರೆ ಹೇಳಲಿ ನಾವೇ ಬೆಳಗಾವಿಗೆ ಭೇಟಿ ನೀಡಿ ಮರಾಠಿ ಭಾಷೆಗಳ ಸಮಸ್ಯೆ ಆಲಿಸುತ್ತೇವೆ ಎಂದು ರಾವತ್ ಹೇಳಿದರು.
Laxmi News 24×7