Breaking News
Home / Uncategorized / ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ

ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ

Spread the love

ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡು ಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ವಿಶೇಷ ತಂಡ: ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.


Spread the love

About Laxminews 24x7

Check Also

ಬಿಜೆಪಿ ಕೋಟೆಯಲ್ಲಿ ಯಂಗ್ ಕಾರ್ಡ್ ಪ್ಲೇ ಮಾಡಿರುವ ಕಾಂಗ್ರೆಸ್‌

Spread the love ಬಿಜೆಪಿ ಕೋಟೆಯಲ್ಲಿ ಯಂಗ್ ಕಾರ್ಡ್ ಪ್ಲೇ ಮಾಡಿರುವ ಕಾಂಗ್ರೆಸ್‌ ಕರ್ನಾಟಕದಲ್ಲಿ ಮೇ 7 ರಂದು 14 ಲೋಕಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ