Breaking News

ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಎಲ್.ಕೆ.ಅತೀಕ್

Spread the love

ಬೆಳಗಾವಿ: ‘ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಎಲ್ಲ ಕಾಮಗಾರಿಗಳಿಗೆ ವೇಗ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು.

 

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ ಮಿಷನ್ ಯೋಜನೆ ಕುರಿತು ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರತಿ ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು’ ಎಂದು ನಿರ್ದೇಶನ ನೀಡಿದರು.

ಬೆಳಗಾವಿ ವಿಭಾಗ ವ್ಯಾಪ್ತಿಯ ಜಿಲ್ಲೆಗಳಲ್ಲಿ ಈ ಯೋಜನೆಗಳಡಿ ಆಗಿರುವ ಪ್ರಗತಿ ಬಗ್ಗೆ ಪರಿಶೀಲಿಸಿದರು. ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಮಲತ್ಯಾಜ್ಯ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿದರು.

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ವಚ್ಛ ಭಾರತ ಮಿಷನ್ ಯೋಜನೆ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ