Breaking News

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್: ಸಿಐಡಿ ತನಿಖೆಯಲ್ಲಿ ಮತ್ತೊಂದು ಹಗರಣ ರಿವೀಲ್

Spread the love

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಮತ್ತೊಂದು ಸ್ಪೋಟಕ ಟ್ವಿಸ್ಟ್ ದೊರೆತಿದೆ. ಪರೀಕ್ಷಾ ಅಕ್ರಮದ ಬಗ್ಗೆ ಪರೀಕ್ಷಾ ಉಸ್ತುವಾರಿ ಅಮೃತ್ ಪಾಲ್ ಗೆ ಪರೀಕ್ಷೆಯ ಬಳಿಕ ಅಭ್ಯರ್ಥಿಗಳು ದೂರು ನೀಡಿದ್ದರೂ, ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸಿರುವಂತ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಸಿಐಡಿ ರಿವೀಲ್ ಮಾಡಿದೆ.

 

 

ಪಿಎಸ್‌ಐ ನೇಮಕಾತಿ ಅಕ್ರಮವನ್ನು ಸ್ವತಹ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದಂತ ಅಮೃತ್ ಪಾಲ್ ಅವರೇ ಆರ್ಡರ್ ಮಾಡಿಸಿ ಅಕ್ರಮ ಮಾಡಿದ್ದಾರೆ ಎನ್ನಲಾಗಿದೆ. ಅವರ ಆಣತಿಯಂತೆಯೇ ಪಿಎಸ್‌ಐ ನೇಮಕಾತಿ ಸ್ಕ್ಯಾಮ್ ನಡೆದಿದೆ ಎನ್ನುವಂತ ಸ್ಪೋಟಕ ಮಾಹಿತಿಯನ್ನು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

 

ಇನ್ನೂ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಅಮೃತ್ ಪಾಲ್ ಅವರನ್ನು ಜೂನ್ 6, 12ರಂದು ಭೇಟಿಯಾಗಿದ್ದಂತ ಅಭ್ಯರ್ಥಿಗಳು ಅಕ್ರಮದ ಬಗ್ಗೆ ದೂರು ನೀಡಿದ್ದರು. ಈ ದೂರಿನಲ್ಲಿ ಬ್ಲೂ ಟೂತ್ ಬಳಸಿ, ಪರೀಕ್ಷೆಯಲ್ಲಿ ಅಕ್ರಮ ನಡೆಸಲಾಗಿದೆ. ಸೂಕ್ತ ತನಿಖೆ ನಡೆಸಿ, ತಪ್ಪಿ ತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಗಿತ್ತು.

 

ಆದ್ರೇ ಅಕ್ರಮದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ಕೈಗೊಳ್ಳಬೇಕಿದ್ದಂತ ಅಮೃತ್ ಪಾಲ್ ಮಾತ್ರ ಅಕ್ರಮದ ಅರಿವಿದ್ದರೂ ಕ್ರಮ ಜರುಗಿಸದೇ ಕಳ್ಳಾಟ ಮೆರೆದಿರುವುದನ್ನು ಸಿಐಡಿ ತನಿಖೆಯಲ್ಲಿ ರಿವೀಲ್ ಮಾಡಿದೆ ಎನ್ನಲಾಗಿದೆ. ಈ ಎಲ್ಲಾ ಅಂಶಗಳನ್ನು ಸಿಐಡಿ ತನಿಖೆಯ ಮಾಹಿತಿಯಲ್ಲಿ ದಾಖಲಿಸಿರೋದಾಗಿ ಹೇಳಲಾಗುತ್ತಿದೆ. ಈ ಮೂಲಕ ಅಮೃತ್ ಪಾಲ್ ಅವರ ಮತ್ತೊಂದು ಸ್ಪೋಟಕ ಹಗರಣ ಬೆಳಕಿಗೆ ಬಂದಂತೆ ಆಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ