Breaking News

ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Spread the love

ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್​ (22) ಶಿಕ್ಷೆಗೊಳಗಾದ ಆರೋಪಿ.

2021ರ ಏಪ್ರಿಲ್​ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ, ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ