Breaking News

ಬಿಜೆಪಿಗರೇ, ನಾನು ರೌಡಿಶೀಟರ್‌, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?

Spread the love

ಮೈಸೂರು: ‘ಬಿಜೆಪಿಗರೇ, ನಾನು ರೌಡಿಶೀಟರ್‌, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ?’ ಎಂದು ಬರೆದಿದ್ದ ಬ್ಯಾನರ್ ಹಿಡಿದು, ಮಂಜು ಅಲಿಯಾಸ್ ಪಾನಿಪುರಿ ಮಂಜ ಎನ್ನುವವರು ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಶನಿವಾರ ಸಾರ್ವಜನಿಕರ ಗಮನಸೆಳೆದರು.

 

ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಸ್ವಾಮೀಜಿ, ಕನಕದಾಸ, ವಾಲ್ಮೀಕಿ, ಅಂಬೇಡ್ಕರ್ ಚಿತ್ರ ಹಾಕಿದ್ದ ಬ್ಯಾನರ್‌ ಹಿಡಿದಿದ್ದರು. ಗಣೇಶ ನಗರದ ನಿವಾಸಿಯಾದ ಅವರು, 2013ರಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದರು ಎಂದು ತಿಳಿದುಬಂದಿದೆ.

ಅವರನ್ನು ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ಸಂಬಂಧ ಉದಯಗಿರಿ ಠಾಣೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ