Breaking News

ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ

Spread the love

ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.

 

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಉತ್ತಮ ಚಿಕಿತ್ಸೆ ಸಿಗುವ ವಿಶ್ವಾಸವಿದೆ ಎಂದರು.

 

ಶೀಘ್ರವೇ ರಾಜ್ಯದಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಡಿಸೆಂಬರ್ ಕೊನೆಯ ವಾರದಲ್ಲಿ 437 ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ಆರಂಭಿಸಲಾಗುತ್ತಿದೆ. ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ಹಾಗೂ ಕನ್ನಡ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಹಾವೇರಿ ಜಿಲ್ಲೆಯ 73 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ

Spread the loveಹಾವೇರಿ : ನಾಲ್ಕು ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಕೊರೊನಾ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನ ಸೃಷ್ಟಿಸಿತ್ತು. ಕೊರೊನಾದಲ್ಲಿ ನೂರಾರು ಜನರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ