ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ.
ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ ಮಾಡುವುದಾಗಿ ಹೇಳಿ 10 ಕೋಟಿ ಪಡೆದುಕೊಂಡಿದ್ದಾರೆ. ವಚನಾನಂದ ಶ್ರೀಗಳ ಮುಖವಾಡ ಶೀಘ್ರವೇ ಬಯಲಾಗಲಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದರು.
Laxmi News 24×7