Breaking News

ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

Spread the love

ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ.

ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು.

ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ ಫೋನ್ ಮಾಡಿದ ನಂತರ ವಿಷಯ ಗೊತ್ತಾಗಿದೆ.

ಖಡೇಬಜಾರ್ ಎಸಿಪಿ ಚಂದ್ರಪ್ಪ ನೇತೃತ್ವದಲ್ಲಿ ಅಹಮದಾಬಾದ್‌ಗೆ ಹೋದ ವಿಶೇಷ ತಂಡ, ಆರೋಪಿಯನ್ನು ಬಂಧಿಸಿದೆ.

ಕ್ಯಾಂಪ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ