Home / ರಾಜಕೀಯ / ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿ.ಎಂ: ಇಬ್ರಾಹಿಂ
Congress Talk-star CM Ibrahim during in Congress election rally in Vijayapura on Sunday. -KPN ### Congress Talk-star

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿ.ಎಂ: ಇಬ್ರಾಹಿಂ

Spread the love

ಹುಬ್ಬಳ್ಳಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್‌.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.

 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಸಂಪೂರ್ಣ ಬಹುಮತ ಬಂದರೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಚುನಾವಣಾ ಆಮಿಷ ಕೋರ್ಟ್‌ಗೆ ಮೊರೆ: ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರಿಗೆ ಹಣ, ವಸ್ತುಗಳನ್ನು ಹಂಚುವ ವಿಷಯವನ್ನು ಜೆಡಿಎಸ್ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯವನ್ನು ನ್ಯಾಯಾಲಯಕ್ಕೆ ಪಕ್ಷ ಕೊಂಡೊಯ್ಯಲಿದೆ. ಇಂತಹ ಆಮಿಷ ಪ್ರಕರಣಗಳನ್ನು ಪತ್ತೆ ಹಚ್ಚುವ ಸಲುವಾಗಿಯೇ ಬೆಂಗಳೂರಿನಲ್ಲಿ ವಾರ್‌ರೂಂ ಆರಂಭಿಸಲಾಗಿದ್ದು, 400 ಯುವಕರು ಇದಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ವಕ್ಫ್‌ಬೋರ್ಡ್‌ ಶಿಕ್ಷಣ ಸಂಸ್ಥೆ ಆರಂಭಿಸಿ ಅದಕ್ಕೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಎಂಬ ಮಾನ್ಯತೆ ಪಡೆಯಲಿ. ಆದರೆ, ಮುಸ್ಲಿಂ ವಿದ್ಯಾರ್ಥಿಗಳಿಗಾಗಿಯೇ ಶಿಕ್ಷಣ ಸಂಸ್ಥೆ ಆರಂಭಿಸುವುದು ಸರಿಯಲ್ಲ. ಶಿಕ್ಷಣ ಸಂಸ್ಥೆಯಲ್ಲಿ ಎಲ್ಲ ಜಾತಿ- ಧರ್ಮದವರಿಗೂ ಅವಕಾಶ ಇರಬೇಕು ಎಂದು ‍ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ