Breaking News

ಒಂದೇ ಹುಡುಗನನ್ನು ಮದುವೆಯಾದ ಅವಳಿ ಸಹೋದರಿಯರು!

Spread the love

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಐಟಿ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಒಂದೇ ವ್ಯಕ್ತಿಯನ್ನು ಮದುವೆ ಆಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್​ ಎಂಬ ಗ್ರಾಮದಲ್ಲಿ ಶುಕ್ರವಾರ ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಲಾಗಿದೆ.

 

ಈ ವಿವಾದಾತ್ಮಕ ಮದುವೆಗೆ ಯುವಕ ಮತ್ತು ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಅಂದಹಾಗೆ ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಕಾರಣ, ಒಬ್ಬರನ್ನೊಬ್ಬರು ಬಿಟ್ಟು ದೂರ ಇರಲಾಗದೇ ಇಬ್ಬರು ಸಹೋದರಿಯರು ಅತುಲ್ ಅವರನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಅತುಲ್​ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಕೆಲ ದಿನಗಳ ಹಿಂದೆ ತಂದೆ ನಿಧನರಾದ ಹಿನ್ನೆಲೆಯಲ್ಲಿ ಸಹೋದರಿಯರು ತಾಯಿಯೊಂದಿಗೆ ವಾಸವಾಗಿದ್ದರು. ಯಾವಾಗ ತಾಯಿಗೂ ಅನಾರೋಗ್ಯ ಕಾಡಲು ಆರಂಭಿಸಿತೋ ಆಗ ಅತುಲ್ ಕಾರಿನಲ್ಲಿ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್​ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ


Spread the love

About Laxminews 24x7

Check Also

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

Spread the love ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ