ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರ ಬೆಳಗಾವಿ ಭೇಟಿ ರದ್ದು ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷ ಸುಳಿವು ನೀಡಿದ್ದಾರೆ
ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದಾರೆ. ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂಕೋರ್ಟ್ ತಗೆದುಕೊಳ್ಳುತ್ತೆ. ಈ ಸಂದರ್ಭದಲ್ಲಿ ಯಾವುದೇ ಹೊಸ ವಿವಾದ ಸೃಷ್ಟಿಸುವುದು ಯೋಗ್ಯವಲ್ಲ ಎಂದು ಅವರು ಹೇಳಿದರು.
ಸುಪ್ರೀಂಕೋರ್ಟ್ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ. ನಾಳೆ ಮಹಾಪರಿನಿರ್ವಾಹಣ ದಿನದ ನಿಮಿತ್ತ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲಿದ್ದರು.
ಸಚಿವರು ಕೈಗೊಂಡ ನಿರ್ಣಯ ಯಾರೂ ತಡೆಯಲು ಸಾಧ್ಯವಿಲ್ಲ. ಆದ್ರೆ ಮಹಾಪರಿನಿರ್ವಾಹಣ ದಿನ ನಾವು ಈ ರೀತಿ ವಾದ ಸೃಷ್ಟಿಸೋದು ಸರಿನಾ?ನಾವು ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಬಗ್ಗೆ ಸಿಎಂ ಏಕನಾಥ ಶಿಂಧೆ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ. ಮಹಾಪರಿನಿರ್ವಾಹಣ ದಿನ ಅತ್ಯಂತ ಮಹತ್ವದ ದಿನ ಅಂದು ಯಾವುದೇ ಅಹಿತಕರ ಘಟನೆ ಆಗಬಾರದು.
ಈ ದಿನ ಯಾವುದೇ ಪ್ರತಿಭಟನೆ ಆಗುವುದು ಯೋಗ್ಯವಲ್ಲ. ಭವಿಷ್ಯದಲ್ಲಿ ನಾವು ಬೆಳಗಾವಿ ಹೋಗೋದನ್ನ ಯಾರೂ ತಡೆಯಲಾಗಲ್ಲ. ಸ್ವತಂತ್ರ ಭಾರತದ ಯಾವುದೇ ಪ್ರದೇಶಕ್ಕೆ ಹೋಗಲು ಯಾರೂ ಯಾರನ್ನೂ ತಡೆಯಲಾಗಲ್ಲ ಎಂದು ಫಡ್ನವೀಸ್ ಹೇಳಿದರು