Breaking News

ಮಹಾರಾಷ್ಟ್ರ ಸಚಿವರ ಗಡಿ ಪ್ರವೇಶಕ್ಕೆ ನಿಷೇಧ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ

Spread the love

ಬೆಳಗಾವಿಗೆ ಮಹಾರಾಷ್ಟ್ರ ಸಚಿವದ್ವಯರ ಸಂಸದ ಭೇಟಿ ವಿಚಾರ ಗಡಿ ಪ್ರವೇಶಕ್ಕೆ ನಿಷೇಧ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದ್ದು CRPC 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಡಿಸಿ ಆದೇಶಸಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ನೀಡಲಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ನೀಡಿದ್ದು ಮಹಾರಾಷ್ಟ್ರದ ಗಡಿ ಸಮನ್ವಯ ಸಚಿವ ಚಂದ್ರಕಾಂತ ಪಾಟೀಲ್, ಶಂಭುರಾಜ ದೇಸಾಯಿ. ಮಹಾರಾಷ್ಟ್ರದ ಗಡಿತಜ್ಞ ಸಮಿತಿ ಅಧ್ಯಕ್ಷ, ಸಂಸದ ಧೈರ್ಯಶೀಲ ಮಾನೆಗೆ ಪ್ರವೇಶ ನಿರ್ಭಂಧಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿ ಕ್ರಮ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದ ಸಚಿವರು ಆಗಮನ ಹಿನ್ನೆಲೆ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದ್ದು, ಭಾಷಾ ವೈಷಮ್ಯ ಬೆಳೆದು ಕಾನೂನು ಸುವ್ಯವಸ್ಥೆ ಧಕ್ಕೆಯಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯುಂಟಾಗುವ ಸಾಧ್ಯತೆ ಇರುತ್ತೆ. ಸಾರ್ವಜನಿಕರ ನೆಮ್ಮದಿ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ
ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ಹೊರಡಿಸಲಾಗಿದೆ


Spread the love

About Laxminews 24x7

Check Also

ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ. ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ

Spread the love ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಅಪಪ್ರಚಾರ ವಿಚಾರ ಕುಂದಾನಗರಿ ಬೆಳಗಾವಿಯಲ್ಲಿ ಧರ್ಮಸ್ಥಳ ಭಕ್ತರಿಂದ ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ