ಬೆಂಗಳೂರು: ಮುಸ್ಲಿಮರ ವೇಷಭೂಷಣ ಧರಿಸಿದ ನಾಯಕರ ಫೋಟೋಗೆ ಮುಸ್ಲಿಂ ಹೆಸರನ್ನು ಹಾಕಿ ವ್ಯಂಗ್ಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್‌ಗೆ ಜೆಡಿಎಸ್ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.
‘ಈ ಎರಡೂ ಪಕ್ಷಗಳ ಪಾಲಿಗೆ ಮುಸ್ಲಿಮರು ಅಬ್ಬೇಪಾರಿಗಳಾಗಿದ್ದಾರೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದ್ದಾರೆ.
‘ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ತುಚ್ಛವಾಗಿ ಕಾಣಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ ಹೆಸರು ಬೇರೆ ಆದರೆ ಉದ್ದೇಶ ಮಾತ್ರ ಒಂದೇ, ಸಮುದಾಯಗಳ ನಡುವೆ ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುವುದೇ ಇವರ ನಿತ್ಯ ಕಾಯಕ’ ಎಂದು ಅವರು ಹೇಳಿದ್ದಾರೆ.
Laxmi News 24×7