Breaking News

ಟೀಕೆಗೆ ಮುಸ್ಲಿಮರ ಹೆಸರು ಬಳಕೆ: ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ

Spread the love

ಬೆಂಗಳೂರು: ಮುಸ್ಲಿಮರ ವೇಷಭೂಷಣ ಧರಿಸಿದ ನಾಯಕರ ಫೋಟೋಗೆ ಮುಸ್ಲಿಂ ಹೆಸರನ್ನು ಹಾಕಿ ವ್ಯಂಗ್ಯ ಮಾಡುತ್ತಿರುವ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್‌ಗೆ ಜೆಡಿಎಸ್‌ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.

 

‘ಈ ಎರಡೂ ಪಕ್ಷಗಳ ಪಾಲಿಗೆ ಮುಸ್ಲಿಮರು ಅಬ್ಬೇಪಾರಿಗಳಾಗಿದ್ದಾರೆ’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದ್ದಾರೆ.

‘ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದವರು ಮುಸಲ್ಮಾನರನ್ನು ಯಾರು ಹೇಗೆ ಬೇಕಾದರೂ ತುಚ್ಛವಾಗಿ ಕಾಣಬಹುದು ಎಂದುಕೊಂಡಿದ್ದಾರೆ, ಇವರಿಬ್ಬರ ಹೆಸರು ಬೇರೆ ಆದರೆ ಉದ್ದೇಶ ಮಾತ್ರ ಒಂದೇ, ಸಮುದಾಯಗಳ ನಡುವೆ ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುವುದೇ ಇವರ ನಿತ್ಯ ಕಾಯಕ’ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ