ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು.
ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ ಸುಮಾರು 500ಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದರು.
ವಸತಿ, ದೇವಸ್ಥಾನದಲ್ಲಿ ದೇವಿ ದರ್ಶನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಪೊಲೀಸ್ ಸಿಬ್ಬಂದಿಗಳು ನೋಡಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಯನ್ನು ಯಾರೂ ನಂಬಬೇಡಿ ಎಂದು ಮನವಿ ಮಾಡಿದರು.