ವಿದ್ಯಾರ್ಥಿಗಳು ತಮ್ಮಲ್ಲಿರುವ ಸದನಶೀಲತೆ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಮಾಜಿಕ ಉತ್ಪಾದನಾ ಕಾರ್ಯದಲ್ಲಿ ಸಶಕ್ತ ಗೊಳ್ಳಬೇಕು ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್ ನಾಲತವಾಡ ಹೇಳಿದರು.
ಅವರು ಇಂದು ನಗರದ ಕೆಎಲ್ಇ ಜಿ.ಎ.ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ಮತ್ತು ಪಠ್ಯಧಾರಿತ ವಸ್ತು ಪ್ರದರ್ಶನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಪ್ರತಿ ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆ ಹಂತದಲ್ಲಿ ಕಲಿಕೋತ್ಸವ ಚಟುವಟಿಕೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದರು.
ಅಧ್ಯಕ್ಷತೆಯನ್ನು ಜಿಎ ಉಪರಾಚಾರ್ಯ ಸಿದ್ದರಾಮಯ್ಯ ಗದಗ್ ವಹಿಸಿದ್ದರು
ಈ ವೇಳೆ ಬೆಳಗಾವಿ ಜಿಲ್ಲೆಯ ಈಗ ತಾಲೂಕುಗಳ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಪಾಲುಗೊಂಡು ತಮ್ಮ ಕೌಶಲವನ್ನು ಪ್ರದರ್ಶಿಸಿದರು.