Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ಅಥಣಿ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿ & ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ:

ಅಥಣಿ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿ & ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ:

Spread the love

ಅಥಣಿ ಪಟ್ಟಣದ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆಯೆ ಕಾರಣವೆಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದ್ದಾರೆ.

ಅಥಣಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಿಲು ತಾವು ಪುರಸಭೆ ಸದಸ್ಯರಾಗಿದ್ದ ಸಮಯದಿಂದಲೂ ಪ್ರಸ್ತಾವನೆ ಸಲ್ಲಿಸುತ್ತ ಬರುತ್ತಿದ್ದರೂ ಕೂಡ ತಾಂತ್ರಿಕ ಕಾರಣ ಇಟ್ಟುಕೊಂಡು ಪುರಸಭೆಯನ್ನು ನಗರಸಭೆಯನ್ನಾಗಿಸಲು ಅಡ್ಡಿಪಡಿಸಲಾಗುತ್ತಿದೆ.

2011ರ ಜನಗಣತಿಯಲ್ಲಿ ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ನಲವತ್ತು ಸಾವಿರದಷ್ಟು ಜನಸಂಖ್ಯೆ ಇತ್ತು. ಈಗ ಜನಸಂಖ್ಯೆ ಹೆಚ್ಚಳವಾಗಿದ್ದು ಮತದಾರರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರೂ ಕೂಡ ಜನಪ್ರತಿನಿಧಿಗಳ ಮತ್ತು ಸರ್ಕಾರಿ ಅಧಿಕಾರಿಗಳ ನಿರ್ಲಕ್ಷದಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದರು.

ಅಲ್ಲದೆ ಅಥಣಿಯ ಜೋಡಿ ಕೆರೆಗಳ ಅಭಿವೃದ್ಧಿಗೆ ಬಂದ ಅನುದಾನ ಮರಳಿ ಹೋಗಿದ್ದು ಪಟ್ಟಣದ ಜನರು ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತಿದೆ ಕೆರೆ ತುಂಬಿಸುವ ಯೋಜನೆ ಮತ್ತು ಅಭಿವೃದ್ಧಿಗೆ ಬಂದ ಅನುದಾನ ಮರಳಿ ಹೋಗಿರುವದು ವಿಪರ್ಯಾಸ.


Spread the love

About Laxminews 24x7

Check Also

ಸಿದ್ದರಾಮಯ್ಯನವರ ಕ್ಯಾಬಿನೆಟ್​ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ.: ರಮೇಶ್ ಜಾರಕಿಹೊಳಿ ಕಳವಳ

Spread the love ಚಿಕ್ಕೋಡಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಯಾಬಿನೆಟ್​ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂಸೆಯಾಗುತ್ತಿದೆ. ಸಿದ್ದರಾಮಯ್ಯನವರು ಇದ್ದಾಗಲೇ ಸತೀಶ್​ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ