Breaking News

ಕರ್ನಾಟಕ &ಮಹಾರಾಷ್ಟ್ರದ ಗಡಿ ಖ್ಯಾತೆ ಮಹಾಜನ್ ಆಯೋಗದ ವರದಿ ಒಪ್ಪೋದೇ ಪರಿಹಾರ

Spread the love

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಖ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ.

ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಇದೇ ರೀತಿಯ ಖ್ಯಾತಿಯನ್ನು ತೆಗೆದುಕೊಂಡು ಬಂದಿದೆ. ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಒಪ್ಪಿಲ್ಲಾ, ಮಹಾಜನ್ ಆಯೋಗವನ್ನ ರಚನೆ ಮಾಡಿಸಿದವರು ಮಹಾರಾಷ್ಟ್ರದವರು. ನಂತರ ಮಹಾಜನ್ ಆಯೋಗದ ವರದಿಗೆ ತಕರಾರು ಮಾಡಿದರು ಎಂದರು.‌

ಅಲ್ಲದೇ ದೇಶದಲ್ಲಿ ಶಾಂತಿಯಿಂದ ಇರಬೇಕೆಂಬ ಇಚ್ಛೆ ಮಹಾರಾಷ್ಟ್ರದವರಿಗಿಲ್ಲ. ಕರ್ನಾಟಕ ಮಹಾರಾಷ್ಟ್ರ ಕನ್ನಡ ಮರಾಠಿ ಎಂಬ ಕ್ಷುಲ್ಲಕ ವಿಚಾರ ಮಾಡಿಕೊಂಡು ಬಂದಿದ್ದಾರೆ.

ಈ ಮೂಲಕ ಮಹಾರಾಷ್ಟ್ರದವರು ದೇಶದಲ್ಲಿ ಅಶಾಂತಿಯನ್ನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ವೋಟ್ ಬ್ಯಾಂಕ್ ಗಾಗಿ ಮಾಡುತ್ತಿರುವ ಕುತಂತ್ರ ಎಂದರು. ಮಹಾರಾಷ್ಟ್ರದ ಬಿಜೆಪಿ ಇರಬಹುದು ಶಿವಸೇನೆ ಇರಬಹುದು, ಎಂಇಎಸ್ ಇರಬಹುದು ಇವರೆಲ್ಲ ವೋಟ್ ರಾಜಕಾರಣದಿಂದ ಮಾಡುತ್ತಿದ್ದಾರೆ.

ಮಹಾಜನ್ ಆಯೋಗದ ವರದಿ ಒಪ್ಪೋದೇ ಇದಕ್ಕೆ ಒಂದೇ ಪರಿಹಾರ ಎಂದು ಯತ್ನಾಳ ಹೇಳಿದರು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ