Breaking News

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿ ಪಾವತಿಗೆ ಆದೇಶ

Spread the love

ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್ ಗೆ ಸಂಬಂಧಿಸಿದಂತೆ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧವಾಗಿ ಇಂದು ಆದೇಶ ಹೊರಡಿಸಲಾಗಿದೆ.

ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು.

ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಡಿ.5 ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ.

ಕಬ್ಬಿನ ಎಫ್.ಆರ್.ಪಿ. ಹೆಚ್ಚಳ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ