ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಸಹಾಯಕ ಕಮಾಂಡೆಂಟ್ (ಡಿವೈಎಸ್ಪಿ) ವೈಜನಾಥ್ ಕಲ್ಯಾಣಿ ರೇವೂರ ಅವರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ದಿವ್ಯಾ ಮತ್ತು ವೈಜನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠವು ವಜಾಗೊಳಿಸಿ ಆದೇಶಿಸಿದೆ.
ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಪೊಲೀಸರು ಏಪ್ರಿಲ್ 29ರಂದು ಪುಣೆಯಲ್ಲಿ ಬಂಧಿಸಿದ್ದರು. ಮೇ 6ರಂದು ವೈಜನಾಥ್ ಅವರನ್ನು ಬಂಧಿಸಲಾಗಿತ್ತು
Laxmi News 24×7