ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ ಫಲಿಕಾಂಶ ನಿರೀಕ್ಷೆಯಂತೆಯೇ ಬಂದಿದೆ. ಆದರೆ, ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷಗಳ ನಡುವೆ ಒಳಒಪ್ಪಂದವಾಗಿರುವ ಬಗ್ಗೆ ಅನುಮಾನಗಳೂ ವ್ಯಕ್ತವಾಗುತ್ತಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಗುರುವಾರ ಹೇಳಿದ್ದಾರೆ. ಮುಂಬೈ: ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ ಫಲಿಕಾಂಶ ನಿರೀಕ್ಷೆಯಂತೆಯೇ ಬಂದಿದೆ. ಆದರೆ, ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷಗಳ ನಡುವೆ ಒಳಒಪ್ಪಂದವಾಗಿರುವ ಬಗ್ಗೆ ಅನುಮಾನಗಳೂ ವ್ಯಕ್ತವಾಗುತ್ತಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಗುರುವಾರ ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್ ಅವರು, ನಿರೀಕ್ಷಿಸಿದಂತೆಯೇ ಫಲಿತಾಂಶ ಬಂದಿದೆ. ಆದರೆ, ದೆಹಲಿ ನೀವಿಟ್ಟುಕೊಳ್ಳಿ, ಗುಜರಾತ್ ನಮಗೆ ಬಿಟ್ಟುಕೊಡಿ ಎಂಬಂತಹ ಒಳಒಪ್ಪಂದ ಬಿಜೆಪಿ-ಆಮ್ ಆದ್ಮಿ ಪಕ್ಷದ ನಡುವೆ ಆಗಿತ್ತೇ ಎಂಬುದರ ಬಗ್ಗೆ ಜನರಲ್ಲಿ ಅನುಮಾನಗಳು ಶುರುವಾಗಿದೆ ಎಂದು ಹೇಳಿದ್ದಾರೆ.
Laxmi News 24×7