Breaking News

ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ.

Spread the love

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ ಹಿನ್ನೆಲೆ ಪೊಲೀಸರ ವಿರುದ್ಧ ಕರವೇ ಶಿವರಾಮೇ ಗೌಡ ಕೆಂಡಾಮಂಡಲವಾಗಿದ್ದಾರೆ.

ಎಂಇಎಸ್ ಪುಂಡರನ್ನ,ಮರಾಠಿ ಪುಂಡರನ್ನ ಮೊದಲು ಬಂಧಿಸಿ, ಕರ್ನಾಟಕದ ಬಸ್ಸುಗಳಿಗೆ ಬೆಂಕಿ ಹಚ್ಚಿದವರನ್ನ ಬಂಧಿಸಿ, ನಮ್ಮನ್ನ ಬಂಧಿಸಿ ಹೋರಾಟವನ್ನ ಹತ್ತಿಕ್ಕಲಾಗ್ತಿದೆ.

ರಾಜ್ಯ ಸರ್ಕಾರ ಕನ್ನಡಪರ ಹೋರಾಟವನ್ನ ಹತ್ತಿಕ್ಕುತ್ತಿದೆ, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಕರವೇ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ಆರಂಭಕ್ಕೂ ಮುನ್ನವೇ ರಾಜ್ಯ ಸರ್ಕಾರ ಹತ್ತಿಕ್ಕುತ್ತಿದೆ, ಹೋರಾಟಕ್ಕೂ ಮೊದಲೇ ನಮ್ಮನ್ನ ಬಂಧಿಸಲಾಗುತ್ತಿದೆ. ಎಂದು ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ವೇಳೆ ಹೈಡ್ರಾಮ ನಡೆಸಲಾಗಿದೆ.

ಬೆಳಗಾವಿ ನಮ್ಮದು‌ ಬೆಳಗಾವಿ ನಮ್ಮದು ಘೋಷಣೆ ಕೂಗುತ್ತಲೇ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಎಂಇಎಸ್ ,ಶಿವಸೇನೆ ದೇಶದ್ರೋಹಿಗಳು ಎಂದು ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ಶುರು ಮಾಡಿದ ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಪೊಲೀಸರ ನಡೆ ವಿರುದ್ಧ ಶಿವರಾಮೇ ಗೌಡ ಆಕ್ರೋಶ ಹೊರ ಹಾಕಿದ್ದಾರೆ.


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ