Breaking News

ಚಿಕ್ಕೋಡಿ ಪಟ್ಟಣದಲ್ಲಿ ಹಿಮಾಚಲಪ್ರದೇಶದ ವಿಜಯೋತ್ಸವ ಆಚರಿಸಿದಕಾಂಗ್ರೆಸ್ ಕಾರ್ಯಕರ್ತರು

Spread the love

ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಗೆಲವು ಹಿನ್ನಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಸಿಡಿಸಿ ವಿಜಯೋತ್ಸವನ್ನು ಆಚರಿಸಿದರು.

ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ನೇತ್ರತ್ವದಲ್ಲಿ ವಿಜಯೋತ್ಸವ ಜರುಗಿತು. ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆಗಳನ್ನು ಪಟಾಕಿ ಸಿಡಿಸಿ ವಿಜಯೋತ್ಸವನ್ನು ಆಚರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮಾತನಾಡಿ ಹಿಮಾಚಲಪ್ರದೇಶಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ. ಜನ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು.

ನಂತರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ ಮಾತನಾಡಿ ಭಾರತ ಮುಕ್ತ ಕಾಂಗ್ರೆಸ್ ಎನ್ನುತ್ತಿದ್ದ ಬಿಜೆಪಿಗರಿಗೆ ಹಿಮಾಚಲಪ್ರದೇಶದಲ್ಲಿ ಜನತಕ್ಕ ಪಾಠವನ್ನು ‌ಕಲಿಸಿದ್ದಾರೆ ಎಂದರು.

ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ರಾಮಾ ಮಾನೆ, ಸಾಬೀರ ಜಮಾದಾರ,ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಗೌಡ ಪಾಟೀಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ