Breaking News

ಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಧನ್ಯವಾದ ಹೇಳಿಕೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ

Spread the love

ರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ.
ಬೆಳಗಾವಿಯ ಸವದತ್ತಿ ಯಲ್ಲಮ್ಮನ ಗುಡ್ಡ ಯಾತ್ರಿಕ ಕೇಂದ್ರದಿಂದ ಮಹಾರಾಷ್ಟ್ರ ರಾಜ್ಯಕ್ಕೆ 145 ಬಸ್ಗಳು ಮತ್ತು ನೂರಾರು ಪ್ರಯಾಣಿಕ ವಾಹನಗಳನ್ನು ಬೆಳಗಾವಿ ಪೊಲೀಸರು ಸುರಕ್ಷಿತವಾಗಿ ರವಾನಿಸಿದ್ದಾರೆ. ನಮಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಧನ್ಯವಾದಗಳು ಎಂದು ಎಂಎಸ್ಆರ್ಟಿಸಿ ಅಧಿಕಾರಿಗಳು ಹೇಳಿದ್ದಾರೆ. ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ದೇವಸ್ಥಾನದಲ್ಲಿ ‘ಹೊಸ್ತಿಲ ಹುಣ್ಣಿಮೆ’ ಪ್ರಯುಕ್ತ ಆಯೋಜಿಸಿದ್ದ ಜಾತ್ರೆಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶದ ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.
ಗಡಿ ವಿವಾದ ಬೆನ್ನಲ್ಲೇ ಸವದತ್ತಿ ಮೂಲಕ ಸಾಗುವ ಮಹಾರಾಷ್ಟ್ರ ವಾಹನಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಲಾಗಿತ್ತು.

Spread the love

About Laxminews 24x7

Check Also

ರಾಜ್ಯದಲ್ಲಿ ಬಾಲ್ಯ ವಿವಾಹ ಕಡಿವಾಣಕ್ಕೆ ಕಠಿಣ ಮಸೂದೆ: ಬಾಲ್ಯ ವಿವಾಹಕ್ಕೆ ಪ್ರಯತ್ನ, ನಿಶ್ಚಿತಾರ್ಥವೂ ಅಪರಾಧ; ಏನೆಲ್ಲಾ ಶಿಕ್ಷೆ, ದಂಡ?

Spread the loveಬೆಂಗಳೂರು: ರಾಜ್ಯದಲ್ಲಿ ಬಾಲ್ಯ ವಿವಾಹದ ಪ್ರಮಾಣ ವರ್ಷಂಪ್ರತಿ ಹೆಚ್ಚುತ್ತಲೇ ಇದೆ.‌ ಅಧಿಕಾರಿಗಳು ಎಷ್ಟೇ ಜಾಗೃತಿ ಮೂಡಿಸಿದರೂ ಬಾಲ್ಯ ವಿವಾಹಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ