Breaking News

ದೇವದಾಸಿಯರ ಮಕ್ಕಳಿಗೆ ತಂದೆ ಹೆಸರು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಲು ಸರ್ಕಾರ ನಿರ್ಧಾರ

Spread the love

ಬೆಂಗಳೂರು: ‘ದೇವದಾಸಿಯರ ಮಕ್ಕಳು ಸರ್ಕಾರಿ ಸೌಲಭ್ಯ ಪಡೆಯಲು ತಂದೆಯ ಹೆಸರನ್ನು ದಾಖಲಿಸುವುದು ಕಡ್ಡಾಯವಲ್ಲ, ಅದು ಐಚ್ಚಿಕವಾಗಿರುತ್ತದೆ.’ ಹೀಗೆಂದು ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಕುಂದು ಕೊರತೆ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

 

ಶಾಲಾ-ಕಾಲೇಜುಗಳಿಗೆ ಪ್ರವೇಶ ಪಡೆಯುವಾಗ, ಜಾತಿ ಆದಾಯ ಪ್ರಮಾಣ ಪತ್ರ ಸೇರಿದಂತೆ ಯಾವುದೇ ದಾಖಲೆಗಳಲ್ಲಿ ತಂದೆಯ ಹೆಸರು ದಾಖಲಿಸುವುದು ಈ ಮಕ್ಕಳಿಗೆ ಕಡ್ಡಾಯವಿರಬಾರದು. ಕೆಲವು ಕಡೆ ತಂದೆಯ ಹೆಸರು ಕಡ್ಡಾಯವಾಗಿರುವುದರಿಂದ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅರ್ಜಿಗಳನ್ನು ತಿರಸ್ಕರಿಸಲಾಗುತ್ತಿದೆ. ಮಕ್ಕಳಿಗೆ ಅವಮಾನವಾಗುತ್ತಿದೆ ಎಂಬುದರ ಕುರಿತಾಗಿ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ.

ತಂದೆಯ ಹೆಸರು ನಮೂದಿಸುವುದು ಕಡ್ಡಾಯವಲ್ಲ, ಅವರ ಇಚ್ಛೆಗೆ ಬಿಡಬೇಕು ಎಂದು ಆದೇಶ ಹೊರಡಿಸಲು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ