Breaking News

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ:H.D.K.

Spread the love

ಮುಂದಿನ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲ್ಲ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ‌. ಕುಮಾರಸ್ವಾಮಿ ಹೇಳಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ  ಈಗಾಗಲೇ ಜಾತ್ಯಾತೀತ ಜನತಾದಳ ವತಿಯಿಂದ ಸಾಕಷ್ಟು ಚುನಾವಣೆ ತಯಾರಿ ‌ನಡೆಸಲಾಗುತ್ತಿದೆ. ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪಂಚರತ್ನ ಸಮಾವೇಶವನ್ನು ನಡೆಸಲಾಗುತ್ತಿದ್ದು ಉತ್ತಮ ಪ್ರತಿಕ್ರಿಯೆ ಜನರಿಂದ ಬಂದಿದೆ . ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ನಡೆಸಲಾಗುತ್ತದೆ. ಕೇಲವೇ ದಿನಗಳಲ್ಲಿ ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆಸಲಾಗುತ್ತದೆ ಎಂದರು.

ನಂತರ ಪೆಬ್ರವರಿ ತಿಂಗಳಲ್ಲಿ ಉತ್ತರ ಕರ್ನಾಟಕದಲ್ಲಿ ಆರಂಭ ಮಾಡುತ್ತೆವೆ.ಚಳಿಗಾಲದ ಅಧಿವೇಶನಕ್ಕೆ ಕುಮಾರಸ್ವಾಮಿ ಗೈರು? ಚಳಿಗಾಲ ಅಧಿವೇಶನ ಭಾಗವಹಿಸಿಲ್ಲ ನಾನು. ಈಗಾಗಲೇ ನಿರ್ಧಾರ ಮಾಡಿದ್ದು ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ ಏಕೆಂದರೆ ಪಕ್ಷದ ವತಿಯಿಂದ ಪಂಚರತ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದರಿಂದಾಗಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ ಎಂದ ಅವರು ಅಧಿವೇಶನದಲ್ಲಿ ನಮ್ಮ ಪಕ್ಷದ ಹಿರಿಯ ಶಾಸಕರಾದ ಬಂಡೆಪ್ಪ ಕಾಶಂಪುರ ಅವರು ನನ್ನ ಪರವಾಗಿ ಭಾಗವಹಿಸುತ್ತಾರೆ ಎಂದರು.

ರಾಜ್ಯದದಲ್ಲಿ ಗುಜರಾತ್ ಮಾದರಿ ನಡೆಯಲ್ಲ ಎಂದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ