Breaking News

ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್:

Spread the love

ಜನಕಾಂಗ್ರೆಸ್ ಕಡೆ ಮುಖ ಮಾಡಲಿದ್ದಾರೆ : ಬೆಳಗಾವಿ ಮತ್ತು ಇಡೀ ರಾಜ್ಯಕ್ಕೆ ಬದಲಾವಣೆ ಮಾಡಬೇಕು ಅಂತಾ ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ನೋಡ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟು ಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ. ಕುಟುಂಬಸ್ಥರಿಗೆ ಟಿಕೆಟ್ ನೀಡುವಂತೆ ಹಲವು ನಾಯಕರ ಅರ್ಜಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಕುಟುಂಬ ರಾಜಕಾರಣದಲ್ಲಿ ಗೆಲ್ಲುವ ಕೆಪ್ಯಾಸಿಟಿ ಇದ್ರೇ ಕೊಡಬಹುದು. ಅವರು ಗೆಲ್ತಾರೆ ಅಂದ್ರೇ ಒಂದೇ ಕುಟುಂಬಕ್ಕೆ ಎರಡು ಮೂರು ಟಿಕೆಟ್ ಕೊಡಬಹುದು. 2023ರಲ್ಲಿ ದಲಿತ ಸಿಎಂ ಆಗಬೇಕಾ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ದಲಿತ ಸಿಎಂ ಆಗಬೇಕು ಎಂಬುದು ಗುರಿಯಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಅವರು ತಿಳಿಸಿದರು.

ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್:  ಮಹಾನಗರ ಪಾಲಿಕೆ ಚುನಾವಣೆ ನಡೆದು ಒಂದು ವರ್ಷವಾದರೂ ಮೇಯರ್, ಉಪಮೇಯರ್ ಚುನಾವಣೆ ನಡೆಯದಿಲ್ಲ.

ಪಾಲಿಕೆ ಸದಸ್ಯರಿಗೆ ಅಧಿಕಾರ ಎನ್ನುವುದು ಈಗ ಸಿಗಬಹುದು, ನಾಳೆ ಸಿಗಬಹುದು ಎನ್ನುವಂತಾಗಿದೆ ಎಂದ ಅವರು, ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ತಮಗೆ ಎಲ್ಲ ಬೇಕೋ ಅಲ್ಲಿ ಕೆಲಸ ಮಾಡಿಸಿ ಹಣ ಬಿಡುಗಡೆ ಮಾಡಿಕೊಳ್ಳುತ್ತಿದ್ದಾರೆ. ಪಾಲಿಕೆ ಕ್ರಮ ಇದೇ ರೀತಿ ಮುಂದುವರೆದರೆ ಮುಂದೆ ಒಂದು ದಿನ ಗೌನ್ ಗಳನ್ನು ಹಸ್ತಾಂತರಿಸುವ ಕಾರ್ಯ ನಡೆಯಲಿದೆ ಎಂದರು.

ಗಡಿ ಭಾಗದಲ್ಲಿ ಚುನಾವಣೆ ಗಿಮಿಕ್: ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದಲ್ಲಿರುವ ಜತ್, ಅಕ್ಕಲಕೋಟೆಯ ಜನ ಕರ್ನಾಟಕಕ್ಕೆ ಬರುವುದಗಾಗಿ ಹೇಳಿದ್ದಾರೆ. ಅವರು ಇಲ್ಲಿ ಬರೋಕೆ ಆಗಲ್ಲ.

ನಾವು ಅಲ್ಲಿ ಹೋಗೊಕ್ಕೆ ಆಗಲ್ಲ. ಅದು ಕೇವಲ ಚರ್ಚೆಗೆ ಸಿಮೀತವಾಗುತ್ತದೆ. ಒಂದು ಬಾರಿ ವಿಭಜನೆಯಾದರೆ ಅಂತಿಮ‌ ಚರ್ಚೆ. ಈ ಭಾಗದ ಜನರಿಗೆ ಕುಡಿಯು ನೀರು ಕೊಡದೆ ಇರುವುದು ಮಹಾರಾಷ್ಟ್ರದ ರಾಜಕೀಯ ಗಿಮಿಕ್ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಹಣಮನ್ನವರ್‌, ಮಹಾವೀರ ಮೋಹಿತೆ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ