Breaking News

ಕಾಂತಾರ 2’ಗೆ ಪಂಜುರ್ಲಿಯ ಅನುಮತಿ ಕೇಳಿದ ಚಿತ್ರತಂಡ: ರಿಷಬ್‌ಗೆ ಎಚ್ಚರಿಕೆ ಕೊಟ್ಟ ದೈವ!

Spread the love

ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಮ್ಸ್ ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಥ್ರಿಲ್ ಆಗಿದ್ದಾರೆ. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ!

ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ ‘ಕಾಂತಾರ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ.

ನಿರೀಕ್ಷೆಗಿಂತಲೂ ಬಹುದೊಡ್ಡಮಟ್ಟದ ಗೆಲುವನ್ನು ಸಿನಿಮಾ ಕಂಡಿದೆ. ಇದಕ್ಕೆ ಚಿತ್ರತಂಡದ ಶ್ರಮದ ಜೊತೆಗೆ ದೈವದ ಆಶೀರ್ವಾದವೂ ಕಾರಣ ಎನ್ನಲಾಗುತ್ತಿದೆ.

 

ದೈವವನ್ನು ನಂಬುವ ರಿಷಬ್ ಶೆಟ್ಟಿ, ದೈವದ ಬಗ್ಗೆ ಸಿನಿಮಾ ಮಾಡುವಾದ ನೇಮ, ನಿಷ್ಠೆಗಳಿಂದ ಮಾಡಿದ್ದು, ಅಪಚಾರವಾಗದಂತೆ ನಡೆದುಕೊಂಡಿದ್ದರಿಂದಲೇ ದೈವದ ಆಶೀರ್ವಾದ ಸಿನಿಮಾಕ್ಕೆ ಧಕ್ಕಿ, ದೊಡ್ಡ ಹಿಟ್ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ‘ಕಾಂತಾರ 2’ ಸಿನಿಮಾದ ಮಾತುಕತೆ ಶುರುವಾಗಿದ್ದು, ‘ಕಾಂತಾರ 2’ ಸಿನಿಮಾ ಮಾಡಬಹುದೇ ಎಂದು ಸ್ವತಃ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ಚಿತ್ರತಂಡದವರು ದೈವದ ಅನುಮತಿಯನ್ನು ಕೇಳಿದ್ದಾರೆ. ಈ ಸಂದರ್ಭದಲ್ಲಿ ದೈವವು ಕೆಲವು ಎಚ್ಚರಿಕೆಗಳನ್ನು ಚಿತ್ರತಂಡಕ್ಕೆ ನೀಡಿದೆ.

‘ಕಾಂತಾರ 2’ಗೆ ಅನುಮತಿ ಕೋರಿದ ಚಿತ್ರತಂಡ
 ಮಂಗಳೂರು ನಗರ ಹೊರವಲಯದ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಕಾಂತಾರ ಚಿತ್ರತಂಡ ಭಾಗವಹಿಸಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅವರ ಸಮ್ಮುಖದಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ದೈವದ ಬಳಿ ರಿಷಬ್ ಶೆಟ್ಟಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅನುಮತಿ ಕೇಳಿದೆ. ಈ ಸಂದರ್ಭದಲ್ಲಿ ಸಿನಿಮಾದ ನಿರ್ದೇಶಕ, ನಟ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇನ್ನು ಕೆಲವರು ಹಾಜರಿದ್ದರು.

ರಿಷಬ್‌ ಶೆಟ್ಟಿಗೆ ಎಚ್ಚರಿಕೆ ನೀಡಿದ ದೈವ!

‘ಕಾಂತಾರ’ ಭಾಗ 2 ಸಿನಿಮಾ ಮಾಡಲು ದೈವವು ಅನುಮತಿಯನ್ನು ನೀಡಿದೆ. ಆದರೆ ಕೆಲವು ಷರತ್ತುಗಳನ್ನು, ಎಚ್ಚರಿಕೆಯನ್ನು ದೈವ ನೀಡಿದೆ. ‘ಕಾಂತಾರ’ ಚಿತ್ರತಂಡಕ್ಕೆ ಅಭಯ ನೀಡಿರುವ ಅಣ್ಣಪ್ಪ ಪಂಜುರ್ಲಿ ‘ಮೊದಲು ಚಿತ್ರ ಮಾಡೋವಾಗ ಹತ್ತು ಬಾರಿ ಯೋಚನೆ ಮಾಡಿದ್ದೀರಿ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ. ಮಾಡಿದ ಪ್ರಯತ್ನಕ್ಕೆ ಯಾವತ್ತೂ ಜಯ ಸಿಗುವ ರೀತಿ ಮಾಡುತ್ತೇನೆ. ಈ ಹಿಂದೆ ಇದ್ದ ತಂಡದ ಜೊತೆಗೆ, ಅಷ್ಟೇ ಶುದ್ಧಾಚಾರದಲ್ಲಿ ಮುಂದುವರಿಯಿರಿ’ ಅಂತಾ ದೈವ ಅಣ್ಣಪ್ಪ ಪಂಜುರ್ಲಿ ಕಾಂತಾರ ಚಿತ್ರತಂಡಕ್ಕೆ ಅಭಯ ನೀಡಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ