Breaking News

ಮಹದಾಯಿ  ನದಿ ನೀರನ್ನು ಕರ್ನಾಟಕ  ಅಕ್ರಮವಾಗಿ  ತಿರುಗಿಸಿಕೊಳ್ಳುತ್ತಿದೆ:ಗೋವಾ ಸರ್ಕಾರ

Spread the love

ಪಣಜಿ:  ಮಹದಾಯಿ  ನದಿ ನೀರನ್ನು ಕರ್ನಾಟಕ  ಅಕ್ರಮವಾಗಿ  ತಿರುಗಿಸಿಕೊಳ್ಳುತ್ತಿದೆ ಎಂಬ ಆರೋಪದ ಮೇಲೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.

ಮಹದಾಯಿ ನದಿಯ ನೀರನ್ನು ಹಂಚಿಕೊಳ್ಳುವ ವಿವಾದ ಎರಡೂ ರಾಜ್ಯಗಳ ನಡುವೆ ಸಾಕಷ್ಟು ದೊಡ್ಡ ವ್ಯಾಜ್ಯಕ್ಕೆ ಕಾರಣವಾಗಿದೆ. ಅನುಮತಿಯಿಲ್ಲದೆ ನದಿ ನೀರನ್ನು ಬೇರೆಡೆಗೆ ತಿರುಗಿಸಲು ಕರ್ನಾಟಕ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಗೋವಾ ಆರೋಪಿಸಿದೆ. 

ಸೋಮವಾರ ಈ ಸಂಬಂಧ ಗೋವಾ ಸಿಎಂಸಾವಂತ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೋವಾ ಮತ್ತು ಇತರರ ವಿರೋಧದ ಹೊರತಾಗಿಯೂ ಕರ್ನಾಟಕವು ನೀರನ್ನು ಬೇರೆಡೆಗೆ ತಿರುಗಿಸಿದೆ ಎಂದು ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ದಾವೆ ಹೂಡಲಾಗಿದೆ ಎಂದಿದ್ದರು. ಮಂಗಳವಾರ ಈ ಸಂಬಂಧ ತಮ್ಮ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.

ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಮಹದಾಯಿ ದಿ ನೀರನ್ನು ಹಂಚುವ ಕುರಿತು 2018 ರಲ್ಲಿ ಅಂತರ ರಾಜ್ಯ ಜಲ ವಿವಾದ ನ್ಯಾಯಮಂಡಳಿ ತನ್ನ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಮೂರು ರಾಜ್ಯಗಳೂ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು.

ನಾವು ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದೇವೆ. ಕರ್ನಾಟಕ ನದಿ ನೀರನ್ನು ತಿರುಗಿಸಿದ್ದಕ್ಕೆ ವಿಡಿಯೋ ಸಾಕ್ಷ್ಯಗಳು ಸೇರಿದಂತೆ ಅನೇಕ ದಾಖಲೆಗಳನ್ನು ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ