ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಸಿಎಂಗೆ ಸೂಚಿಸಬೇಕು ಎಂದು ಹೇಳಿದೆ.
ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್‍ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿರುವ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Laxmi News 24×7