Breaking News

ಸಲಾಂ ಆರತಿ: ಪೂಜೆಯ ಹೆಸರಿನಲ್ಲಿ ಮಾತ್ರ ಬದಲಾವಣೆ; ಪೂಜೆ ರದ್ದುಪಡಿಸುವ ಯಾವುದೇ ಚಿಂತನೆ ಇಲ್ಲ

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ.

ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಕೆಲವು ದೇವಾಲಯಗಳಲ್ಲಿ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆಯ ಸಂಧರ್ಭಗಳಲ್ಲಿ ದೀವಟಿಗೆ ಹಿಡಿದು ದೇವಾಲಯಕ್ಕೆ ಮತ್ತು ದೇವರಿಗೆ ಆರತಿಯಂತೆ ನಡೆಸುವ ಕಾರ್ಯಕ್ಕೆ ದೀವಟಿಗೆ ಸಲಾಂ, ಸಲಾಂ ಮಂಗಳಾರತಿ ಮತ್ತು ಸಲಾಂ ಆರತಿ ಎಂದು ಕೆಲವು ದೇವಾಲಯಗಳಲ್ಲಿ ಕರೆಯಲಾಗುತ್ತಿದೆ. ಇದನ್ನ ಬದಲಾಯಿಸಬೇಕು ಎನ್ನುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಕ್ತಾದಿಗಳಿಂದ ಸಾಕಷ್ಟು ಒತ್ತಾಯ ಇರುವ ಬಗ್ಗೆ, ಧಾರ್ಮಿಕ ಪರಿಷತ್ತಿನ ಸದಸ್ಯರು ಸಭೆಯ ಗಮನಕ್ಕೆ ತಂದರು. ಇದರ ಹಿನ್ನಲೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತ ಚರ್ಚೆಯನ್ನು ನಡೆಸಲಾಯಿತು.

ಈ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಹಿರಿಯ ಆಗಮ ಪಂಡಿತರ ಅಭಿಪ್ರಾಯದಂತೆ ದೇವಾಲಯಗಳಲ್ಲಿ ಇನ್ನು ಮುಂದೆ “ದೀವಟಿಗೆ ಸಲಾಂ” ಎಂಬ ಪದದ ಬದಲಾಗಿ “ದೀವಟಿಗೆ ನಮಸ್ಕಾರ” ಎಂದು, “ಸಲಾಂ ಆರತಿ” ಎಂಬ ಪದದ ಬದಲಾಗಿ “ಆರತಿ ನಮಸ್ಕಾರ” ಎಂದು ಹಾಗೂ ʼಸಲಾಂ ಮಂಗಳಾರತಿ” ಎಂಬ ಪದದ ಬದಲಾಗಿ “ಮಂಗಳಾರತಿ ನಮಸ್ಕಾರ” ಎಂದು ಹೆಸರನ್ನು ಬದಲಾಯಿಸಿಕೊಂಡು ಸೇವೆಗಳನ್ನು ಮತ್ತು ಸೇವಾಕಾರ್ಯಗಳನ್ನು ಮುಂದುವರೆಸಲು ಸುತ್ತೋಲೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರದ್ದುಪಡಿಸಲಾಗಿಲ್ಲ: ಕೇವಲ ಬೇರೆ ಭಾಷೆಯ ಪದಗಳನ್ನು ಬದಲಾಯಿಸಿ, ನಮ್ಮ ಭಾಷೆಯ ಪದವನ್ನು ಅಳವಡಿಸಿ ಈ ಹಿಂದಿನಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಮತ್ತು ಪೂಜೆಗಳನ್ನು ಮುಂದುವರೆಸಲಾಗುವುದು. ಪೂಜಾ ಕಾರ್ಯಗಳನ್ನು ರದ್ದುಪಡಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಹಿಂದೂ ಧಾರ್ಮಿಕ ಹಾಗೂ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವಂತಹ ಎ ಮತ್ತು ಬಿ ವರ್ಗದ ದೇವಸ್ಥಾನಗಳು ಪ್ರತಿವರ್ಷ ಆಡಿಟ್‌ ಮಾಡಿಸುವುದು ಕಡ್ಡಾಯ. ಆದರೆ, ಹಲವಾರು ದೇವಸ್ಥಾನಗಳಲ್ಲಿ ಹಲವಾರು ವರ್ಷಗಳಿಂದ ಆಡಿಟ್‌ ಮಾಡಿಸಿರಲಿಲ್ಲ. ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಜವಾಬ್ದಾರಿ ತಗೆದುಕೊಂಡ ನಂತರ ದೇವಸ್ಥಾನಗಳ ಆಡಳಿತದಲ್ಲಿ, ಭಕ್ತರು ನೀಡುವ ಕಾಣಿಕೆಯ ಬಳಕೆಯ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಡಿಟ್‌ ವರದಿಯನ್ನ ಆಯಾ ವರ್ಷವೇ ಸಲ್ಲಿಸುವುದರ ಬಗ್ಗೆ ಕಟ್ಟುನಿಟ್ಟು ಆದೇಶ ನೀಡಲಾಗಿತ್ತು. ದೇವಸ್ಥಾನಗಳು ತಮ್ಮ ಆಡಿಟ್‌ ವರದಿಯನ್ನ ಸರ್ಕಾರಿ ಲೆಕ್ಕಪತ್ರ ಇಲಾಖೆಯಿಂದಲೇ ಆಡಿಟ್‌ ಮಾಡಿಸಿ ವರದಿ ಸಲ್ಲಿಸಿದ್ದಾರೆ. ಖಾಸಗಿ ಸಂಸ್ಥೆಗಳಿಗೆ ಆಡಿಟ್‌ ಹೊಣೆಯನ್ನು ನೀಡಲಾಗಿದೆ ಎನ್ನುವ ಕೆಲವರ ಆರೋಪ ಸತ್ಯಕ್ಕೆ ದೂರವಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ