Breaking News

ರಾಜ್ಯಕ್ಕೆ ಬಿಜೆಪಿ ವರಿಷ್ಠರ ದಂಡು: ಡಿಸೆಂಬರ್‌, ಜನವರಿ ಪೂರ್ಣ ಕಾರ್ಯಕ್ರಮಗಳು

Spread the love

ಬೆಂಗಳೂರು: ಗುಜರಾತ್‌ ಗೆಲುವಿನ ಬಳಿಕ ಬಿಜೆಪಿಯ ದಿಲ್ಲಿ ವರಿಷ್ಠರು ಕರುನಾಡಿನತ್ತ ದಂಡಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

ಇದೇ ತಿಂಗಳಿನಿಂದ ಸರಣಿ ಸಮಾವೇಶ, ಯೋಜನೆಗಳ ಉದ್ಘಾಟನೆಗಳ ಮೂಲಕ ರಾಜ್ಯ ಮತದಾರರ ಮನಸೆಳೆಯಲು ಮುಂದಾಗಿರುವ ಬಿಜೆಪಿ ರಾಜ್ಯ ಘಟಕ, ಪಕ್ಷದ ಘಟಾನುಘಟಿ ನಾಯಕರನ್ನು ಆಹ್ವಾನಿಸಿದೆ.

ಮುಂದಿನ ಎಪ್ರಿಲ್‌, ಮೇ ವೇಳೆಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಎಲ್ಲ ಸಾಧ್ಯತೆಗಳಿವೆ.

ಜನವರಿಯಲ್ಲಿ ಮೋದಿ
ಜನವರಿ ಮೊದಲ ವಾರದಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಬರಲಿದ್ದಾರೆ. ಆರೋಗ್ಯ ಇಲಾಖೆಯ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯ ರೈತ ಮೋರ್ಚಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಡಿ. 15ರಂದು ನಡ್ಡಾ ಭೇಟಿ
ಡಿ. 15ರಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೊಪ್ಪಳಕ್ಕೆ ಆಗಮಿಸ ಲಿದ್ದು, 11 ಸಂಘಟನಾತ್ಮಕ ಜಿಲ್ಲೆಗಳಲ್ಲಿ ನಿರ್ಮಿಸಿರುವ ಬಿಜೆಪಿ ಕಚೇರಿಗಳ ಉದ್ಘಾ ಟನೆ ನೆರವೇರಿಸಲಿದ್ದಾರೆ.

ಶಕ್ತಿ ಸಂಗಮ
ಡಿ. 18ರಂದು ಬೆಂಗಳೂರಿನಲ್ಲಿ ಬಿಜೆಪಿಯ 24 ಪ್ರಕೋಷ್ಠಗಳ ಕ್ರಿಯಾಶೀಲ ಕಾರ್ಯಕರ್ತರ ರಾಜ್ಯ ಸಮಾವೇಶ “ಶಕ್ತಿಸಂಗಮ’ವನ್ನು ಆಯೋಜಿಸಲಾಗಿದೆ.

ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರೈಲ್ವೇ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿ‌ನಿ ವೈಷ್ಣವ್‌ ಉದ್ಘಾಟಿಸಲಿದ್ದಾರೆ.

ಆರೆಸ್ಸೆಸ್‌ ನಿರಂತರ ಸಂಪರ್ಕ
ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಆರೆಸ್ಸೆಸ್‌ ನಾಯಕರು ನಿರಂತರ ಸಂಪರ್ಕ ಹಾಗೂ ಸಮಾ ಲೋಚನೆಯಲ್ಲಿರುವುದು ಕುತೂಹಲ ಮೂಡಿಸಿದೆ. ಆರೆಸ್ಸೆಸ್‌ ಮುಖಂಡ ಮುಕುಂದ್‌ ಶುಕ್ರವಾರ ಬೆಳಗ್ಗೆ, ರಾತ್ರಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ಆರೆಸ್ಸೆಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೂ ಸಿಎಂ ಜತೆ ಸಂಪರ್ಕದಲ್ಲಿದ್ದಾರೆ. ಮುಂದಿನ ಚುನಾವಣೆಯ ಕಾರ್ಯತಂತ್ರದ ಭಾಗವಾಗಿ ಈ ಭೇಟಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಉಡುಪಿಗೆ ಯೋಗಿ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಇದೇ ತಿಂಗಳು ಉಡುಪಿಯಲ್ಲಿ ನಡೆಯಲಿರುವ ಅಟಲ್‌ ಉತ್ಸವ ಯುವ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ಅನಂತರ ಜ. 12ರ ವಿವೇಕಾನಂದ ಜನ್ಮದಿನೋತ್ಸವದಂದು ಯುವ ಮೋರ್ಚಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.


Spread the love

About Laxminews 24x7

Check Also

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

Spread the loveಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ