ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಜರುಗಿತು.
ಭಾನುವಾರ ದಂದು ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ರವಳನಾಥ ಪಂಚಕ್ರೋಶಿ ಸಾಹಿತ್ಯ ಅಕಾಡೆಮಿ ವತಿಯಿಂದ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಬೆಳಿಗ್ಗೆ ಸಮ್ಮೇಳನದ ಅಧ್ಯಕ್ಷರು ಗ್ರಂಥ ದಿಂಡಿಗೆ ಚಾಲನೆ ನೀಡುವ ಮೂಲಕ ಸಾಹಿತ್ಯ ಸಮ್ಮೇಳೆಕ್ಕೆ ಅಧಿಕೃತವಾಗಿ ಉದ್ಘಾಟಿಸಿದರು.ನಂತರ ಗ್ರಂಥದಿಂಡಿಯು ಗ್ರಾಮದ ವಿವಿಧ ಬೀದಿಗಳಲ್ಲಿ ಸಂಚರಿಸಿತು.ಚಿಕ್ಕಮಕ್ಕಳು ಆಕರ್ಷಕ ವೇಷಭೂಷಣದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಮೆರುಗು ತಂದರು.
ನಂತರ ವೇದಿಕೆ ಕಾರ್ಯಕ್ರಮ ನೆರವೇರಿತು.ರಾಮಚಂದ್ರ ಪಾಟೀಲ ಅವರು ಸ್ವಾಗತ ಭಾಷಣ ಮಾಡಿ ಎಲ್ಲ ಗಣ್ಯಮಾನ್ಯರಿಗೂ ಹಾಗೂ ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಎಲ್ಲರಿಗೂ ಸ್ವಾಗತ ಕೋರಿದರು.
 Laxmi News 24×7
Laxmi News 24×7
				 
		 
						
					 
						
					 
						
					