Breaking News

ಅದ್ಧೂರಿಯಾಗಿ ಜರುಗಿದ ಅಭಿ-ಅವಿವಾ ನಿಶ್ಚಿತಾರ್ಥ

Spread the love

ಸ್ಯಾಂಡಲ್‌ವುಡ್‌ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು.

ಇದೀಗ ರೆಬೆಲ್ ಸ್ಟಾರ್ ಅಂಬರೀಶ್‌ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು.

ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿಅಭಿಷೇಕ್‌ ಮತ್ತು ಅವಿವಾ ಎಂಗೇಜ್ಮೆಂಟ್‌ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬಸ್ಥರ ಮಧ್ಯ ಸೈಲೆಂಟ್ ಆಗಿ ನಿಶ್ಚಿತಾರ್ಥ ನೆರವೇರಿದೆ. ಖ್ಯಾತ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಜೊತೆ ಅಭಿಷೇಕ್ ಮದುವೆ ನಿಶ್ಚಯವಾಗಲಿದೆ. ಈ ಕಾರ್ಯಕ್ರಮಕ್ಕೆ ಕೆಲವೇ ಜನರನ್ನು ಆಹ್ವಾನಿಸಲಾಗಿದೆ. ಈಗಾಗಲೇ ರಾಜಕೀಯ ಗಣ್ಯರು, ಚಿತ್ರನಟರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

 

ಇನ್ನು ಅಭಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ನಿಶ್ಚಿತಾರ್ಥವನ್ನು ನೋಡಲು ಕಾತುರತೆಯಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಕುರಿತ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಅಗುತ್ತಿದ್ದು, ಅಭಿ ಅವಿವಾ ನೋಡಿ ಅಭಿಮಾನಿಗಳು ಸೂಪರ್‌ ಜೋಡಿ ಅಂತ ಕಾಮೆಂಟ್‌ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಪ್ರೀತಿಸುತ್ತಿದ್ದರು.

ಇಬ್ಬರ ಕುಟುಂಬಸ್ಥರು ಇವರ ಲವ್‌ಗೆ ಗ್ರೀನ್ ಸಿಗ್ನಲ್ ನೀಡಿದ್ದರು. ಇದೀಗ ಕ್ಯೂಟ್‌ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಅಭಿ ಮತ್ತು ಅವಿವಾ ಮದುವೆ ಮುಂದಿನ ವರ್ಷ ಅಂದ್ರೆ ಜನವರಿ 2023ರ ಸಂಕ್ರಾಂತಿ ಹಬ್ಬದಂದು ಅದ್ಧೂರಿಯಾಗಿ ನಡೆಯಲಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

Spread the loveಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ