Breaking News

ಶಿರಸಿ ಪ್ರತ್ಯೇಕ ಜಿಲ್ಲೆ: ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ -ದೇಶಪಾಂಡೆ

Spread the love

ಶಿರಸಿ: ಉತ್ತರ ಕನ್ನಡವನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವ ವಿಚಾರಕ್ಕೆ ಸಂಬಂಧಿಸಿ ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.

 

‘ಜಿಲ್ಲೆ ದೊಡ್ಡದಾಗಿರುವ ಕಾರಣ ಅಭಿವೃದ್ಧಿ ಆಗಿಲ್ಲ ಎಂಬ ವಾದ ಒಪ್ಪಲಾಗದು. ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದೇನೆ. ಸಾಕಷ್ಟು ಅಭಿವೃದ್ಧಿಯನ್ನೂ ಕಂಡಿದೆ. ಆದರೆ ಪ್ರತ್ಯೇಕ ಜಿಲ್ಲೆಗೆ ಆಗ್ರಹ ಈಚೆಗೆ ಬಲವಾಗಿರುವ ಕಾರಣ ಜನರ ಅಭಿಪ್ರಾಯ ಸಂಗ್ರಹ ಮಾಡಬೇಕು’ ಎಂದರು.

ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಗೆ ಜನರ ಒತ್ತಡವಿದ್ದು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಈಚೆಗಷ್ಟೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿಯಲ್ಲಿ ಹೇಳಿದ್ದರು. ಪ್ರತ್ಯೇಕ ಜಿಲ್ಲೆ ರಚನೆಯ ವಿಚಾರವಾಗಿ ತಾನು ಧ್ವನಿ ಎತ್ತಿಲ್ಲ. ಆದರೆ ಬುದ್ಧಿಜೀವಿಗಳು, ಶಾಸಕರೊಂದಿಗೆ ಚರ್ಚಿಸಿ ಅಭಿಪ್ರಾಯ ಆಲಿಸುತ್ತೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶನಿವಾರ ಅಂಕೋಲಾದಲ್ಲಿ ಹೇಳಿಕೆ ನೀಡಿದ್ದರು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ