ಬೆಂಗಳೂರು : ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಚಿತ್ತ ಕರ್ನಾಟಕದತ್ತ ಹರಿದಿದ್ದು, ಬಿಜೆಪಿ ವರಿಷ್ಟರು ಶೀಘ್ರವೇ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.
ಈ ತಿಂಗಳು ಹಾಗೂ ಮುಂದಿನ ತಿಂಗಳು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ನಾಯಕರುಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಜ. 2ನೇ ವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಗಾವಿಯಲ್ಲಿ ನಡೆಯುವ ರೈತ ಮೋರ್ಚಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಹಾಗೆಯೇ ಕೇಂದ್ರ ಸಚಿವ ಅಮಿತ್ ಶಾ ಅವರು ಚಿತ್ರದುರ್ಗದಲ್ಲಿ ಜನವರಿ ಮೊದಲ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಎಸ್ಸಿ ಮೋರ್ಚಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಡಿಸೆಂಬರ್ 15 ರಂದು ಬಾಗಲಕೋಟೆಯ ಜಿಲ್ಲಾ ಕಚೇರಿ ಉದ್ಘಾಟನೆಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಚಿತ್ತ ಕರ್ನಾಟಕದತ್ತ ಹರಿದಿದ್ದು, ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಂತ್ರ ರೂಪಿಸುತ್ತಿದೆ.