ಕಲಬುರಗಿ : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ನಲ್ಲಿ ಬಣಬಡಿದಾಟ ಹೆಚ್ಚಾಗಿದ್ದು, ಇದೀಗ ಕಲಬುರಗಿ ಕಾಂಗ್ರೆಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಗರಂ ಆಗಿದ್ದಾರೆ.
ಡಿಸೆಂಬರ್ 10 ರಂದು ಕಲಬುರಗಿಯಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೇಕಂತಲೇ ಸಿದ್ದರಾಮಯ್ಯ ಅವರು ಅಗೌರವ ತೋರಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.
ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಡಿಸೆಂಬರ್ 10 ರಂದು ನಡೆದ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ವೇದಿಕೆಗೆ ಬಂದ ವೇಳೆ ಕಾಂಗ್ರೆಸ್ ನ ಎಲ್ಲ ನಾಯಕರು ಎದ್ದು ನಿಂತು ಗೌರವ ಸೂಚಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಕುರ್ಚಿ ಮೇಲೆಯೇ ಕುಳಿತುಕೊಂಡು ಖರ್ಗೆ ಅವರಿಗೆ ಅಗೌರವ ಸೂಚಿಸಿದ್ದಾರೆ ಎಂದು ಖರ್ಗೆ ಅಭಿಮಾನಿಗಳು ಆರೋಪಿಸಿದ್ದಾರೆ.
 Laxmi News 24×7
Laxmi News 24×7
				 
		 
						
					 
						
					