ಬೆಳಗಾವಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದಾರೆ.
ದೇಶದ ಜನ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಎಲ್ಲ ವೀರ ಯೋಧರ ತ್ಯಾಗ, ಬಲಿದಾನಗಳ ಸ್ಮರಣೆಗಾಗಿ ಹಾಗೂ ಸೇನೆಯಲ್ಲಿ ಯೋಗದಾನ ನೀಡುತ್ತಿರುವ ನಮ್ಮೆಲ್ಲ ಸೈನಿಕರ ಗೌರವಾರ್ಥವಾಗಿ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪಿಸಲು ಆಗ್ರಹಿಸಿದರು. ಕಡಾಡಿ ಮಾತನಾಡುತ್ತಿರುವಾಗ ಸದನದವು ಗದ್ದಲ ಗೂಡಾಗಿತ್ತು.
Laxmi News 24×7