ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ.
ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು. ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ., ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.