Breaking News

ಇನ್ಮುಂದೆ ಮನೆಯಲ್ಲೇ ಕುಳಿತು `ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು

Spread the love

ಬೆಂಗಳೂರು : ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು.

ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

  • ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
  • ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
  • ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

  • ವೋಟರ್ ಐಡಿ
  • ಆಧಾರ್ ಕಾರ್ಡ್
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

  1. kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
  2. ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ .
  3. ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
  4. ಈ ಜಾಲತಾಣದಲ್ಲಿ ದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ
  5. ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
  6. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
  7. ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಹೊಸ ಪಡಿತರ ಚೀಟಿಗಾಗಿ ಅರ್ಜಿ ಶುಲ್ಕ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದ್ರೇ ಪಡಿತರ ಚೀಟಿ ಬಂದ ನಂತ್ರ, ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ.


Spread the love

About Laxminews 24x7

Check Also

ಮಂಜೂರಾದ ಆಸ್ಪತ್ರೆ ರದ್ದು: ‘ಇದು ಸಚಿವ ತಂಗಡಗಿ ಅಭಿವೃದ್ಧಿ ಮಾದರಿ’ : ಜನಾರ್ದನ್​ ರೆಡ್ಡಿ ವಾಗ್ದಾಳಿ

Spread the loveಗಂಗಾವತಿ (ಕೊಪ್ಪಳ): ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವೆಂಕಟಗಿರಿ ಹಾಗೂ ಇರಕಲ್ ಗಡಾ ಹೋಬಳಿಗೆ ಮಂಜೂರಾಗಿದ್ದ ತಲಾ 30 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ