Breaking News

“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ

Spread the love

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಪವಾರ್ ಅವರ ಸಿಲ್ವರ್ ಓಕ್ಸ್ ಮನೆಗೆ ಕರೆ ಮಾಡಿದ ವ್ಯಕ್ತಿ, ಮುಂಬೈಗೆ ಬಂದು ಕಂಟ್ರಿಮೇಡ್ ಪಿಸ್ತೂಲ್ ನಿಂದ ಶೂಟ್ ಮಾಡುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾನೆ.

 

“ಮುಂಬೈ ಆಯುಂಗಾ ಔರ್ ದೇಸಿ ಪಿಸ್ತೂಲ್ ಸೆ ಗೋಲಿ ಮಾರ್ ದೂಂಗಾ” ಎಂದು ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆಯಲ್ಲಿ ಬೆದರಿಕೆ ಹಾಕಿದ್ದಾನೆ ಎಂದು ಮೂಲಗಳು ತಿಳಿಸಿದೆ.

ಈ ಬಗ್ಗೆ ಶರದ್ ಪವಾರ್ ಅವರ ರಕ್ಷಣಾ ತಂಡ ಗಂದೇವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 294, 506(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

ಘಟನೆಯ ಬಗ್ಗೆ ಎನ್‌ಸಿಪಿಯ ಮುಖ್ಯ ವಕ್ತಾರ ಮಹೇಶ್ ತಾಪಸೆ ಮಾತನಾಡಿ, ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ತೋರುತ್ತಿದ್ದು, ಅವರು ಪವಾರ್ ಅವರ ನಿವಾಸಕ್ಕೆ ಹಲವು ಬಾರಿ ಕರೆ ಮಾಡಿ ಇಂತಹ ಬೆದರಿಕೆಗಳನ್ನು ಹಾಕುತ್ತಿದ್ದ” ಎಂದಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಈ ರೀತಿ ಹಲವು ಬಾರಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಇದರ ಬಗ್ಗೆ ಪೊಲೀಸರಿಗೆ ತಿಳಿಸಲಾಗಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ