Breaking News

ಕೆಪಿಟಿಸಿಎಲ್ ಪರೀಕ್ಷೆ ಮತ್ತೊಬ್ಬ ಪರಾರಿಯಾದ ಆರೋಪಿ ಅಂದರ್

Spread the love

ಗೋಕಾಕ ಶಹರ ಪೊಲೀಸ್ ಠಾಣೆ  ಪ್ರಕರಣದಲ್ಲಿ ತನಿಖಾಧಿಕಾರಿ ಶ್ರೀ ವೀರೇಶ್ ತಿ ದೊಡಮನಿ DYSP DCRB ಇವರು ತನಿಖೆ ಮುಂದುವರೆಸಿ  ದಿನಾಂಕ 14-12-2022 ರಂದು ಈ ಕೇಸಿನಲ್ಲಿಯ ಪರಾರಿ ಇದ್ದ ಇನ್ನೊಬ್ಬ ಪ್ರಮುಖ ಆರೋಪಿ ಸೋಮನಗೌಡ ಶಂಕರಗೌಡ ಪಾಟೀಲ ಬಂಧಿಸಿದ್ದಾರೆ

ವಯಸ್ಸು 36 ವರ್ಷ ರಾಯಭಾಗ ಇವನಿಗೆ ದಸ್ತಗೀರ ಮಾಡಿದ್ದು ಈತನು ದಿನಾಂಕ 07-08-2022 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ ನಡೆದ ಪರೀಕ್ಷೆಯ ಕಾಲಕ್ಕೆ ಗದಗ ಮುನ್ಸಿಪಲ್ ಪಿಯು ಕಾಲೇಜದ ಉಪ ಪ್ರಾಂಶುಪಾಲ ಮಾರುತಿ ಸೋಣಾವನೆ ಮತ್ತು ಅವನ ಮಗ ಸಮೀತ ಕುಮಾರ್ ಸೋಣವನೆ ಇವರಿಗೆ ಇನ್ನಿತರ ಆರೋಪಿತರಿಂದ ಪಡೆದುಕೊಂಡು

ಹೋಗಿದ್ದ 7,10,000/- ರೂಪಾಯಿ ಪೈಕಿ 4,50,000/- ರೂಪಾಯಿ ಸೋಣವಣೆ ಇವರಿಗೆ ಕೊಟ್ಟು ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಒಂದು ಸಿಮ್ ಕಾರ್ಡ್ ಕೊಟ್ಟು ದಿನಾಂಕ 07-08-2022 ರಂದು ಸೋಣವನೆ ಮತ್ತು ಇನ್ನಿತರ ಆರೋಪಿತರ ಮೂಲಕ ಪ್ರಶ್ನೆ ಪತ್ರಿಕೆ ವಾಟ್ಸಪ್ ಮೂಲಕ ಸೋರಿಕೆ ಮಾಡಿಸಿ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟು ಕಳುಹಿಸಿದ್ದ ತಂಡದ ಪ್ರಮುಖ ಆರೋಪಿತರಿಗೆ ಕಳುಹಿಸಿ ಸದರ ಪರೀಕ್ಷೆಯಲ್ಲಿ ಅಕ್ರಮ ನಡೆಯುವಲ್ಲಿ ಪ್ರಮುಖ ಪಾತ್ರಧಾರಿಯಾಗಿರುತ್ತಾನೆ. ಸದರಿಯವನಿಗೆ ಈ ದಿವಸ ಮಾನ್ಯ ನ್ಯಾಯಾಲಯದ ಮುಂದೆ ಹಾಜರಾಪಡಿಸಿದ್ದು ನ್ಯಾಯಾಂಗ ಬಂಧನದಲ್ಲಿ ಇರುತ್ತಾನೆ.


Spread the love

About Laxminews 24x7

Check Also

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಸಮನ್ಸ್​ಗೆ ಹೈಕೋರ್ಟ್ ತಡೆ (

Spread the loveಬೆಂಗಳೂರು: ಕಳೆದ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆ ಉಲ್ಲಘನೆ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ